
110 ಕೆ.ವಿ. ಸಬ್ ಸ್ಟೇಷನ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಶೀಘ್ರ ಬಗೆಹರಿಸಲು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಸಚಿವ ಅಂಗಾರರ ನೇತೃತ್ವದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದರು,ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ರೈತ ಮೋರ್ಚಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ರೈ ಮೇನಾಲ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಉಬರಡ್ಕ ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಸದಸ್ಯರಾದ ಪ್ರಸನ್ನ ದರ್ಬೆ, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ,ದಿನೇಶ್ ಮೆದು ಉಪಸ್ಥಿತರಿದ್ದರು