
ಸುಳ್ಯ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಪಕ್ಷದ ಕಚೇರಿಯಲ್ಲಿ ಆ.23 ರಂದು ನಡೆಯಿತು. ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಓಬಿಸಿ ಸುಳ್ಯ ಮಂಡಲ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋಧ್ ರೈ ಮೇನಾಲ, ಬಿಜೆಪಿ ಮಂಡಲ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಉಪಸ್ಥಿತರಿದ್ದರು. ಓಬಿಸಿ ಪ್ರಧಾನ ಕಾರ್ಯದರ್ಶಿ ನವೀನ್ ಸಾರಕೆರೆ ಸ್ವಾಗತಿಸಿ, ವಂದಿಸಿದರು. ಓಬಿಸಿ ಮಂಡಲದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ನಗರ ಬಿಜೆಪಿ ಕಾರ್ಯದರ್ಶಿ ಜಿನ್ನಪ್ಪ ಕಲ್ಲುಮುಟ್ಲು, ನಗರ ಪಂಚಾಯತ್ ಸದಸ್ಯ ಸುಧಾಕರ್ ಕುರುಂಜಿಭಾಗ್ ಹಾಗೂ ಓಬಿಸಿ ಘಟಕದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
