ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.), ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಆ.29ರಂದು ದರ್ಖಾಸ್ತು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಶಿಬಿರವು ಬೆಳಿಗ್ಗೆ 9.00 ಗಂಟೆಯಿಂದ ಅಪರಾಹ್ನ 2.00 ಗಂಟೆಯ ತನಕ ನಡೆಯಲಿದ್ದು ಸಾರ್ವಜನಿಕರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆಯುವಂತೆ ಸಂಘಟಕರು ವಿನಂತಿಸಿದ್ದಾರೆ.
- Thursday
- November 21st, 2024