ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆ.27ರಂದು ನಡೆಯಿತು.
ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಅರೆಭಾಷೆ ಅಕಾಡೆಮಿ ಬೆಳೆದು ಬಂದ ದಾರಿಯನ್ನು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಎಂ.ಪಿ.,ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ಶ್ರೀಮತಿ ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಉಪಸ್ಥಿತರಿದ್ದರು.
- Thursday
- November 21st, 2024