Ad Widget

ಪೆರುವಾಜೆ: ಭಾವೈಕ್ಯ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಭಾವೈಕ್ಯ ಯುವಕ ಮಂಡಲ (ರಿ.) ಪೆರುವಾಜೆ ಇದರ ವತಿಯಿಂದ ” ಶ್ರೀ ಕೃಷ್ಣ ಜನ್ಮಾಷ್ಟಮಿ” ಕಾರ್ಯಕ್ರಮ ಆ. 29ರಂದು ಪೆರುವಾಜೆಯ ಯುವಕ ಮಂಡಲದ ವೇದಿಕೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕೆಲವು ಸ್ಪರ್ಧೆಯನ್ನು ಆನ್‌ಲೈನ್ ಮುಖಾಂತರ ನಡೆಸಲಾಯಿತು. ಕಾರ್ಯಕ್ರಮವನ್ನು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಯೋಧರಾದ ಕ್ಯಾ| ಸುದಾನಂದ ಮಾವಿನಕಟ್ಟೆ, ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಯುವಕ ಮಂಡಲದ ಗೌರವಾಧ್ಯಕ್ಷರಾದ ಜಯಪ್ರಕಾಶ್ ರೈ ಪೆರುವಾಜೆ ಹಾಗೂ ಯುವಕ ಮಂಡಲದ ಅಧ್ಯಕ್ಷ ವಾಸುದೇವ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಜನೀಶ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು. ರಕ್ಷಿತ್ ಪೆರುವಾಜೆ ಸ್ವಾಗತಿಸಿ, ಸನತ್ ಪೆರುವಾಜೆ ವಂದಿಸಿದರು. ಕಾರ್ಯಕ್ರಮದಲ್ಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಯುವಕ ಮಂಡಲದ ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!