
ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ಮತ್ತು 2020-21ರ ಎರಡು ಅವಧಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಗೆ ಹರೀಶ ಕಡಪಳ ಅವರನ್ನು ಆ. 31 ರಂದು ಸನ್ಮಾನಿಸಲಾಯಿತು. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದಾಗ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸುವಲ್ಲಿ ಮತ್ತು ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷ ಜನಾರ್ದನ. ಎ , ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ ಅಚ್ರಪ್ಪಾಡಿ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಮೆದು , ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಂದರಿ ಮತ್ತು ಪೋಷಕರು ಉಪಸ್ಥಿತರಿದ್ದರು.