

ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ನಡೆದ ಒಂಭತ್ತನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಸರಳವಾಗಿ ನಡೆಯಿತು. ಗೋವಿಂದಯ್ಯ ಕೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದೇವಳದಲ್ಲಿ ವಿಶೇಷ ಪೂಜೆ, ಒಂದರಿಂದ ಆರು ವರ್ಷದ ಒಳಗಿನ ಮಕ್ಕಳಿಗೆ ಕೃಷ್ಣನ ವೇಷ ಸ್ಪರ್ಧೆ ಹಾಗು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು .