ಜೇಸಿಐ ಬೆಳ್ಳಾರೆ,ಜೂನಿಯರ್ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ ‘ಕ್ಷಯ ಮುಕ್ತ ಭಾರತ’ ಕಿರು ಚಿತ್ರದ ರಂಗ ತರಬೇತಿಯ 9ನೇ ದಿನದ ತರಬೇತಿ ಕಾರ್ಯಕ್ರಮದಲ್ಲಿ ಕ್ಷಯ ರೋಗಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮ ಮತ್ತು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಪದ್ಮನಾಭ ಕಲಾಸುಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಬದ್ರುದ್ದೀನ್ .ಎಂ.ಎನ್, ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ಯಾಮ ಸುಂದರ್ ರೈ , ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಜೇಸಿ ಲೋಕೇಶ್ ತಂಟೆಪ್ಪಾಡಿ , ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕ ನಟೇಶ್, ಪುತ್ತೂರು ಘಟಕದ ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕ ರಮೇಶ್ ಎಚ್ ಕೆ , ಬೀಡಿ ಕಾಂಟ್ರಾಕ್ಟರ್ ಮಹಾಲಿಂಗ ನಾಯ್ಕ ಭಾಗವಹಿಸಿದ್ದರು.
ವೇದಿಕೆಯಲ್ಲಿ ರಂಗಕರ್ಮಿ ಕೃಷ್ಣಪ್ಪ ಬಂಬಿಲ, ನಾಟಕ ರಚನೆಕಾರ ಸತೀಶ್ ಕಕ್ಕೆಪದವು , ಜೂನಿಯರ್ ಜೇಸಿ ಅಧ್ಯಕ್ಷೆ ಜೆ ಜೆ ಚಿರಶ್ರೀ, ಜೇಸಿ ಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಜೇಸಿ ಪದ್ಮನಾಭ ಕಲಾಸುಮ ಸ್ವಾಗತಿಸಿ, ಜೇಸಿ ಲೋಕೇಶ್ ತಂಟೆಪ್ಪಾಡಿ ವಂದಿಸಿದರು.