Ad Widget

ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಚಿವರ ಭೇಟಿ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಗುತ್ತಿಗಾರು ಇದರ ವತಿಯಿಂದ ಸಚಿವ ಎಸ್.ಅಂಗಾರ ಅವರನ್ನು ಅವರ ನಿವಾಸದಲ್ಲಿ ಬೇಟಿಯಾಗಿ ಟ್ರಸ್ಟ್ ವತಿಯಿಂದ ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕ ಸೇವೆಗೆ ಅಗತ್ಯವಾಗಿರುವ ಅಂಬ್ಯುಲೆನ್ಸ್ ಖರೀದಿಸಿ ಸೇವೆ ನೀಡುವ ವಿಚಾರವಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವಿನಯ್ ಸಾಲ್ತಾಡಿ, ಟ್ರಸ್ಟ್ ಕೋಶಾಧಿಕಾರಿ ಸುಪ್ರೀತ್ ಗುಡ್ಡೆಮನೆ, ಟ್ರಸ್ಟ್ ಸದಸ್ಯ ಮೋಹನ್ ದಾಸ್ ಶಿರಾಜೆ ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!