Ad Widget

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಜಮಾಬಂದಿ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಸೆ.01 ರಂದು ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇದರ ಉಪನಿರ್ದೇಶಕರಾದ ಪ್ರದೀಪ್ ಡಿಸೋಜಾ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಧೀಕ್ಷಕ ಮಂಜುನಾಥ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ಹಾಗೂ ಉಪಾಧ್ಯಕ್ಷ ವಿಜಯ ಅಂಙಣ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಪಿಡಿಓ ಪುರುಷೋತ್ತಮ ಮಣಿಯಾನಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಬಿಂದು.ಪಿ, ಪದ್ಮಾವತಿ ಕಲ್ಲೇಮಠ, ಶಿಲ್ಪಾ ಕೊತ್ನಡ್ಕ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಜನಾರ್ಧನ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಮಾಜಿ ಅಧ್ಯಕ್ಷ ಹಿಮ್ಮತ್.ಕೆ.ಸಿ, ಸಂಜೀವಿನಿ ಸ್ವ-ಸಹಾಯ ಸಂಘದ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು. ಗ್ರಾಮಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!