ನಮ್ಮ ಸ್ಥಳೀಯ ತೋಟಗಳಲ್ಲಿ ಅನೇಕ ಕೆರೆಗಳಿವೆ. ಅವುಗಳಲ್ಲಿ ಹೇಗೆ ವೈಜ್ಞಾನಿಕವಾಗಿ ಮೀನುಕೃಷಿ ಮಾಡಬಹುದು ಎಂಬುದರ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಚಿವ ಎಸ್ .ಅಂಗಾರ ಅವರು ಹೇಳಿದರು.
ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ಸಂಶೋಧನಾ ಘಟಕದಲ್ಲಿ ನಡೆದ ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ , ಉಡುಪಿ ಭಾಗಗಳ ಮೀನುಗಾರಿಕೆ ಅಭಿವೃದ್ಧಿ ಗೆ ಹೆಚ್ಚಿನ ಒತ್ತು ನೀಡಲಾಗುವುದು. ಒಳನಾಡು ಮೀನುಗಾರಿಕೆಗೂ ಪ್ರೋತ್ಸಾಹ ನೀಡಲಾಗುವುದು. ಮೀನುಗಾರಿಕಾ ಒಳಬಂದರನ್ನು ಮಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದರು. ಕೇಂದ್ರ ಸರಕಾರ ಕೂಡ ಮೀನುಗಾರಿಕೆಗೆ ಸಂಬಂಧಿಸಿದ ಸಂಶೋಧನೆಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.
ಈ ಸಂದರ್ಭ ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ , ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ನ.ಪಂ.ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಕೆವಿಜಿ ಆಯರ್ವೇದಿಕ್ ಕಾಲೇಜು ಪ್ರಾಂಶುಪಾಲ ಡಾ. ಕೆ.ವಿ. ಲೀಲಾಧರ್, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಮೀನುಗಾರಿಕಾ ನಿರ್ದೇಶಕ ರಾಮಾಚಾರ್ಯ, ಕೆವಿಜಿ ಆಯರ್ವೇದ ಫಾರ್ಮಾ ಡಾ. ಪುರುಷೋತ್ತಮ ಕೆ.ಜಿ. ಮೊದಲಾದವರು ಉಪಸ್ಥಿತರಿದ್ದರು. ಮೀನುಗಾರಿಕಾ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್ ಸ್ವಾಗತಿಸಿ ಮೀನುಗಾರಿಕಾ ಸಹಾಯಕ ನಿರ್ದೇಶಕರಾದ ದಿಲೀಪ್ ಕುಮಾರ್ ವಂದಿಸಿದರು. ಪುಷ್ಪರಾಜ ನಿರೂಪಿಸಿದರು.