2020-21ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮತ್ತು ವಿವಿಧ ವಿಷಯಗಳಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸೆ. 8ರಂದು ನಡೆಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನೆಟ್ಟಾರು ವೆಂಕಟ್ರಮಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾಳಿಲ ವಿದ್ಯಾಬೋಧಿನೀ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ನಾರಾಯಣ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದನಾ ಮಾತುಗಳನ್ನಾಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ನಳಿನಿ ಪಿ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಚ್ಚುತ ಮಲ್ಕಜೆ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 611 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾದ ಕು. ಕೃತಿಕಾ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು. ಖುಷಿ, ಕು. ಐಶ್ವರ್ಯ ಮತ್ತು ಕು. ಮೇಘ ಪ್ರಾರ್ಥಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯ ಶಿಕ್ಷಕ ಯಶೋಧರ ನಾರಾಲು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಶಿಕ್ಷಕ ಉದಯಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಮೋಹನ್ ಕೆ.ಸಿ., ಲೋಕೇಶ್ ಬೆಳ್ಳಿಗೆ, ಹರಿಪ್ರಸಾದ್ ರೈ ಮತ್ತು ಸಹನಾ ಬಿ.ವಿ. ಪ್ರತಿಭಾನ್ವಿತರ ಪಟ್ಟಿ ವಾಚಿಸಿದರು. ಪ್ರಥಮ ಸ್ಥಾನ ಪಡೆದ ಕು. ಕೃತಿಕಾ, ದ್ವಿತೀಯ ಸ್ಥಾನ ಪಡೆದ ಕಿರಣ್, ತೃತೀಯ ಸ್ಥಾನ ಪಡೆದ ಭಾವನ ಬಿ.ವಿ. ಮತ್ತು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮತ್ತು ವಿವಿಧ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದತ್ತಿನಿಧಿ ಪುರಸ್ಕಾರ, ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಿಕ್ಷಕರು ಮತ್ತು ಸಿಬ್ಬಂದಿಗಳು ಸಹಕರಿಸಿದರು.