ಯಾರದ್ದೋ ಸಾಧನೆಗೆ ತೃಪ್ತಿ ಪಡಬೇಡಿ ಸ್ವತಃ ತಾವೇ ಸಾಧನೆ ಮಾಡಿ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಹೇಳಿದರು.
ಅವರು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಹಾಗೂ ಎಸ್ ಡಬ್ಲ್ಯೂ ಎಪ್ ಯೋಜನೆಯ ತಂತ್ರಜ್ಞಾನ ಬೆಂಬಲಿತ ಕಲಿಕಾ ಕಾರ್ಯಕ್ರಮದ ಅಡಿಯಲ್ಲಿ ಬರುವ ಕಲಿಕ ಚಟುವಟಿಕೆಗಳ ಕಂಪ್ಯೂಟರ್ ಕೊಠಡಿಯ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇದು ಉತ್ತಮ ಅವಕಾಶ ಎಂದರು. ಯಾರದ್ದೋ ಸಾಧನೆಗೆ ತೃಪ್ತಿ ಪಡಬೇಡಿ ತಾವೇ ಸಾಧನೆ ಮಾಡಿ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
2020-21 ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಕುಮಾರಿ.ಜನನಿ.ಯಂ ಇವಳನ್ನು ಹಾಗೂ ವಿಶಿಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಲೋಚನಾ ದೇವ, ಜ್ಞಾನ ದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು , ಸಂಚಾಲಕರಾದ ಎ.ವಿ.ತೀರ್ಥರಾಮ ಅಂಬೆಕಲ್ಲು, ಅಟಲ್ ಟಿಂಕರಿಂಗ್ ಲ್ಯಾಬ್ ನ ಮೇಲ್ವಿಚಾರಕಿ ಜಯಶ್ರೀ, ನಿವೃತ ಮುಖ್ಯೋಪಾಧ್ಯಾಯರಾದ ದಯಾನಂದ.ಕೆ, ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರುಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ ವಂದಿಸಿ, ಹಿರಿಯ ವಿದ್ಯಾರ್ಥಿ ಸಂಘದ ಪೂರ್ವಾಧ್ಯಕ್ಷರು, ಹಾಗೂ ಅಜ್ಜಾವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗೋಪಿನಾಥ್ ಮೆತ್ತಡ್ಕ ಹಾಗೂ ಗಣಿತ ಶಿಕ್ಷಕ ಮುರಳಿಧರ ಪಿ.ಜೆ. ಕಾರ್ಯಕ್ರಮ ನಿರೂಪಿಸಿದರು.
(ವರದಿ : ರಂಜಿತ್ ಅಂಬೆಕಲ್ಲು)