
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಿಂದಿ ಸಭಾದ ವತಿಯಿಂದ ಹಿಂದಿ ದಿನಾಚರಣೆಯನ್ನು ಸೆಪ್ಟೆಂಬರ್ 14ರಂದು ಆಚರಿಸಲಾಯಿತು.
ಆನ್ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕರಾದ ಡಾ. ನಾಗರತ್ನ ಎನ್ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶ್ರೀಮತಿ ರತ್ನಾವತಿ ಡಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಸಂಚಾಲಕ ಮನೋಜ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕಿ ರಾಜೇಶ್ವರಿ ಎ ಅತಿಥಿಗಳನ್ನು ಪರಿಚಯಿಸಿ ದ್ವಿತೀಯ ಬಿ ಎಸ್ಸಿ ವಿದ್ಯಾರ್ಥಿನಿ ದೀಪಾಲಿ ವಂದನಾರ್ಪಣೆಗೈದರು.