Ad Widget

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಹಾಸನಡ್ಕ ಶಾಲೆಗೆ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ಕೊಡುಗೆ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಅಮರಮುಡ್ನೂರು ಗ್ರಾಮದ ಹಾಸನಡ್ಕ ಕಿರಿಯ ಪ್ರಾಥಮಿಕ ಶಾಲೆಗೆ ಲೇಖನ ಸಾಮಗ್ರಿ ಮತ್ತು ನೋಟು ಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯಕುಮಾರ ಅಮೈ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಎಸ್.ಡಿ.ಎಂ.ಸಿ ಪೂರ್ವಾಧ್ಯಕ್ಷ ತಿಮ್ಮಪ್ಪ ಗೌಡ, ಪ್ರಾಯೋಜಕರಾದ ಮಾಯಿಲಪ್ಪ ಸಂಕೇಶ, ಕಾರ್ಯದರ್ಶಿ ಶಿವರಾಮ್ ಏನೆಕಲ್, ನಿವೃತ್ತ ಶಿಕ್ಷಕ ಗಣಪತಿ ಭಟ್, ಹಾಸನಡ್ಕ ಶಾಲಾ ಪ್ರಸ್ತುತ ಎಸ್.ಡಿ.ಎಂ.ಸಿ ಅಧ್ಯಕ್ಷರು, ಶಿಕ್ಷಕಿಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!