ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ನಿರಂತರ 3 ತಿಂಗಳುಗಳ ಕಾಲ ಶವ ಸಂಸ್ಕಾರ ಮಾಡಿದ ಸ್ವಯಂಸೇವಕರಿಗೆ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಆಹಾರ ವಸ್ತುಗಳ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಉಪಾಧ್ಯಕ್ಷರಾದ ಸರೋಜಿನಿ ಪೆಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬುದ್ಧ ನಾಯ್ಕ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮೇನಾಲ, ಸುಳ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀಕೃಷ್ಣ ಎಂ. ಆರ್, ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರು, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯದರ್ಶಿ ಸಿಂಧೂ ಪ್ರಭು, ಯುವಮೋರ್ಚಾ ಸದಸ್ಯರಾದ ಮುಮ್ತಾಜ್ ನೆಲ್ಯಡ್ಕ, ಸುಳ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾದ ಸುಪ್ರೀತ್ ಮೋಂಟಡ್ಕ, ನಗರ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ ವಂದಿಸಿದರು.
- Saturday
- November 23rd, 2024