Ad Widget

ಪೆರುವಾಜೆ : ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಿಗೆ ಭೋಜನ ವ್ಯವಸ್ಥೆ

ಭಾ ಜ ಪಾ ಯುವಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ತಂಡದ ವತಿಯಿಂದ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ 71ನೇ ಜನ್ಮದಿನದ ಪ್ರಯುಕ್ತ ಪೆರುವಾಜೆ ಗ್ರಾಮ ಪಂಚಾಯತ್ನಲ್ಲಿ ನಡೆದ ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಿದ ಆರೋಗ್ಯ ಸಿಬ್ಬಂದಿಗಳಿಗೆ, ಆಶಾಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಯುವಮೋರ್ಚಾ ವತಿಯಿಂದ ಮಾಡಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಮಾಧವ ಮುಂಡಾಜೆ, ಯುವಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರ್ಷಿತ್ ಕುಮಾರ್ ಪೆರುವಾಜೆ, ಬೂತ್ ಪ್ರಮುಖರಾದ ವಿಜಯ ಆಚಾರ್ಯ, ಸಚಿನ್ ರಾವ್ ಪೆರುವಾಜೆ, ಜಲದುರ್ಗದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ನಾರಾಯಣ ಕೊಂಡೆಪ್ಪಾಡಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!