- Wednesday
- April 2nd, 2025

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಸೆ.10 ರ ಗಣೇಶ ಚತುರ್ಥಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಯಂತ್ ನಾಯ್ಕ್ ಎಲ್ಲಪಡ್ಕ, ಗಿರೀಶ್ ಕಾಂತುಕುಮೇರಿ, ಸಂತೋಷ್ ನಾಯ್ಕ್ ಗಡಿಕಲ್ಲು, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯಾನಂದ ಏನೆಕಲ್ಲು,...

ಕಡಬ ತಾಲೂಕಿನ ಕೇನ್ಯ ಗ್ರಾಮದಲ್ಲಿ ಹಿಂದೂ ಜಾಗರಣ ವೇದಿಕೆ ಮಹಾವಿಷ್ಣು ಘಟಕ ಕಣ್ಕಲ್ ನೇಲಡ್ಕ ವತಿಯಿಂದ ನೂತನವಾಗಿ ನಿರ್ಮಿಸಿದ ವೀರ್ ಸಾವರ್ಕರ್ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಸೆ.18ರಂದು ನಡೆಯಿತು. ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕುಸುಮ ಎಸ್ ರೈ ರವರು ನೂತನ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿದರು. ವಾಸುದೇವ ಕೆರೆಕೋಡಿ ಸಭಾಧ್ಯಕ್ಷತೆ ವಹಿಸಿದ್ದರು. ರಘುನಾಥ ರೈ...

ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಂ ಅಧ್ಯಕ್ಷತೆಯಲ್ಲಿ ಸೆ.18 ರಂದು ಸಂಘದ 3ನೇ ಮಹಡಿಯಲ್ಲಿ ನಡೆಯಿತು.ಸಂಘವು 2020-21 ನೇ ವರ್ಷದ ಅವಧಿಯಲ್ಲಿ ಲಾಭಗಳಿಸಿದ್ದನ್ನು ಪರಿಗಣಿಸಿ, ತನ್ನ ಸದಸ್ಯರಿಗೆ ಶೇ.12 ರಷ್ಟು ಡಿವಿಡೆಂಡ್ ನೀಡುವುದೆಂದು ಅಧ್ಯಕ್ಷರು ಘೋಷಿಸಿದರು. 2020-21 ನೇ ವರ್ಷದ ಆಡಳಿತ ಮಂಡಳಿ ವರದಿಯನ್ನು...

ಕಳೆದ ಆಗಸ್ಟ್ 22 ರಂದು ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿಪೇಪರ್ 1 ಹಾಗೂ ಪೇಪರ್ 2 ಎರಡರಲ್ಲೂ ಪ್ರಥಮ ಪ್ರಯತ್ನದಲ್ಲಿ ಅರ್ಹತೆಯನ್ನು ಪಡೆದಿದ್ದಾರೆ. ಇವರು ಮರ್ಕಂಜ ಗ್ರಾಮದ ಮುಂಡೋಡಿ ಜನಾರ್ಧನ ಹಾಗೂ ಸರಸ್ವತಿ ದಂಪತಿಗಳ ಪುತ್ರಿ. ಪ್ರಸ್ತುತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುಳ್ಯ ತಾಲೂಕಿನ ಪ್ರೊಬೆಷನರಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ಆಡಳಿತ ಸೇವೆಯ ಅಧಿಕಾರಿ ಅಕ್ರಂರವರು ಸೆ.17 ರಂದು ಸರಕಾರಿ ಪ್ರೌಢಶಾಲೆ ದುಗ್ಗಲಡ್ಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತುಂಬು ಸೌಜನ್ಯದೊಂದಿಗೆ ತಮ್ಮ ಯು ಪಿ ಎಸ್ ಸಿ ಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉತ್ತಮ ಶೈಕ್ಷಣಿಕ ತಳಹದಿಯನ್ನು ರೂಪಿಸಿಕೊಂಡು, ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ...