
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ಎಸ್ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್ , ರೋವರ್ಸ್- ರೇಂಜರ್ಸ್ ಘಟಕಗಳು ಹಾಗೂ ಕಾಲೇಜಿನ ಕ್ರೀಡಾ ಸಂಘದ ಸಹಯೋಗದೊಂದಿಗೆ ಫಿಟ್ ಇಂಡಿಯಾ ಮೂವ್ ಮೆಂಟ್ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ವೈಟ್ ಲಿಪ್ಟಿಂಗ್ ಚಾಂಪಿಯನ್ ರಮೇಶ್ ಎ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಬೌದ್ಧಿಕವಾಗಿ ವ್ಯಕ್ತಿ ಸದೃಢವಾದಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆ ನಿಟ್ಟಿನಲ್ಲಿ ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಕಾಲೇಜಿನ ಆಡಳಿತ ಮಂಡಳಿ ಕ್ರೀಡಾ ಪಟುಗಳಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ
ರುದ್ರಕುಮಾರ್ ಎಂ ಎಂ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ, ಎನ್ ಸಿ ಸಿ ಅಧಿಕಾರಿ ಲೆಫ್ಟಿನೆಂಟ್ ಸೀತಾರಾಮ ಎಂ ಡಿ, ಎನ್ ಎಸ್ ಎಸ್ ಘಟಕಾಧಿಕಾರಿಗಳಾದ ಸಂಜೀವ ಕುದ್ಪಾಜೆ, ಚಿತ್ರಲೇಖಾ ಕೆ ಎಸ್, ರೋವರ್ ಘಟಕದ ಕಾರ್ಯಕ್ರಮಾಧಿಕಾರಿ ತಿಪ್ಪೇಸ್ವಾಮಿ ಡಿ ಹೆಚ್, ರೇಂಜರ್ ಘಟಕದ ಕಾರ್ಯಕ್ರಮಾಧಿಕಾರಿ ಹರ್ಷಕಿರಣ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.