
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಪೋಷಣಾ ಅಭಿಯಾನ ಯೋಜನೆಯಡಿ ವಿಭಿನ್ನ ಖಾದ್ಯ ತಯಾರಿ,ಪ್ರದರ್ಶನ ಮತ್ತು ಪೌಷ್ಟಿಕ ಆಹಾರದ ಬಳಕೆಯ ಮಾಹಿತಿ ಕಾರ್ಯಕ್ರಮ ಸೆ.24ರಂದು ನಡೆಯಿತು.
ಪೌಷ್ಟಿಕ ಆಹಾರದ ಅಗತ್ಯ, ಪೌಷ್ಟಿಕ ಆಹಾರದ ಕೊರತೆಯಿಂದ ಉಂಟಾಗುವ ದೈಹಿಕ ತೊಂದರೆ, ಹಿತಮಿತವಾದ ಆಹಾರದ ಬಳಕೆಯಿಂದ ಮಾನಸಿಕ ಮತ್ತು ಬೌದ್ಧಿಕ ವಿಕಸನದ ಪ್ರಯೋಜನಗಳ ಬಗ್ಗೆ ಶಾಲಾ ಹಿಂದಿ ಭಾಷಾ ಶಿಕ್ಷಕಿ ಶ್ರೀಮತಿ ರಮ್ಯಾ.ಕೆ.ಆರ್.ಮಾಹಿತಿ ನೀಡಿದರು.
ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಚಿತ್ರಕಲಾ ಶಿಕ್ಷಕರಾದ ಕಿಶೋರ್ ಕುಮಾರ್ ಬರೆಮೇಲು ಮತ್ತು ಶಿಕ್ಷಕಿ ಶ್ರೀಮತಿ ಸರೋಜಿನಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿ , ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಹತ್ತನೇ ತರಗತಿ ವಿದ್ಯಾರ್ಥಿಗಳು ತಯಾರಿಸಿದ ರುಚಿ ಶುಚಿಯಾದ ವಿವಿಧ ತಿನಿಸುಗಳು ಶಿಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಯು.ಕೆ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. 9ನೇ ತರಗತಿ ವಿದ್ಯಾರ್ಥಿಗಳು ಕಾಳು ಬೇಳೆಗಳಿಂದ ತಯಾರಿಸಿದ ರಂಗೋಲಿ ಮತ್ತು ಪೋಷಣಾ ಅಭಿಯಾನ ಗೀತೆ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು
ವಿದ್ಯಾರ್ಥಿಗಳಾದ ದಿಶಾ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಚಿತ್ರಕಲಾ ಶಿಕ್ಷಕ ಮೋಹನ.ಎ.ಸ್ವಾಗತಿಸಿ ,ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಉಷಾ.ಕೆ.ಎಸ್ ವಂದಿಸಿದರು. ಕುಮಾರಿ ಕೃತಿಕಾ ಮತ್ತು ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.