
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.05ರಿಂದ ನವರಾತ್ರಿ ಉತ್ಸವವು ಆರಂಭಗೊಳ್ಳಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅ.14ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪೂಜಾ ಕಾರ್ಯಗಳು ನೆರವೇರಲಿದ್ದು ದೇವಾಲಯಲ್ಲಿ ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಅ.05ರಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ರಂಗಪೂಜೆ ನಡೆಯಲಿದೆ. ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನೆರವೇರಲಿದೆ. ಅ.15ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಪೂಜೆ ಮಾಡಿಸುವ ಭಕ್ತಾದಿಗಳು ಮುಂಚಿತವಾಗಿ ದೇವಸ್ಥಾನದ ಕಛೇರಿಯನ್ನು ಸಂಪರ್ಕಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ ವಿನಂತಿಸಿದ್ದಾರೆ.