Ad Widget

ಅ.02: ದುಗ್ಗಲಡ್ಕದಲ್ಲಿ ಗಾಂಧಿ ಜಯಂತಿ ಆಚರಣೆ- ಗಾಂಧಿ ನಡಿಗೆ,ಉಪನ್ಯಾಸ,ಭಜನಾ ಸ್ಪರ್ಧೆ ಹಾಗೂ ಸನ್ಮಾನ ಕಾರ್ಯಕ್ರಮ

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದ ಆಚರಣೆ ನಡೆಯಲಿದೆ.
ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಎನ್.ಎಂ.ಸಿ ಯ ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಲೆನಾಡು ಸಿರಿ ಪ್ರಶಸ್ತಿ ಪುರಸ್ಕೃತ ದುಗ್ಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ.ಎ.ಯು ರವರಿಗೆ ಗೌರವಾರ್ಪಣೆ ನಡೆಯಲಿದೆ. ಬಳಿಕ ವಿಶೇಷವಾಗಿ ಗಾಂಧಿ ನಡಿಗೆ, ವಿದ್ಯಾರ್ಥಿಗಳಿಗೆ ಗಾಂಧೀಜಿಯವರ ಚಿತ್ರ ರಚನಾ ಸ್ಪರ್ಧೆ, ದೇಶಭಕ್ತಿಗೀತೆ ಸ್ಪರ್ಧೆ ಹಾಗೂ ಗಾಂಧೀಜಿ ಕುರಿತು ಭಾಷಣ ಸ್ಪರ್ಧೆ ನಡೆಯಲಿದೆ. ಸಾರ್ವಜನಿಕರಿಗೆ ಗಾಂಧೀಜಿಯವರ ಮೆಚ್ಚಿನ ‘ರಘುಪತಿ ರಾಘವ ರಾಜಾರಾಂ’ ಭಜನಾ ಸ್ಪರ್ಧೆ ನಡೆಯಲಿದೆ. ಭಜನಾ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು. ಬಳಿಕ ಬಹುಮಾನ ವಿತರಣೆ ನಡೆಯಲಿದೆ. ಸ್ಪರ್ಧೆಗಳ ಹೆಚ್ಚಿನ ಮಾಹಿತಿಗಾಗಿ 9448464593 ಯನ್ನು ಸಂಪರ್ಕಿಸುವಂತೆ ಕಾರ್ಯಕ್ರಮ ಸಂಘಟಕರಾದ ಕುರಲ್ ತುಳುಕೂಟದ ಸಂಚಾಲಕರಾದ ಕೆ.ಟಿ.ವಿಶ್ವನಾಥ, ಅಧ್ಯಕ್ಷರಾದ ನಾರಾಯಣ ಟೈಲರ್ ಹಾಗೂ ಮಿತ್ರ ಯುವಕ ಮಂಡಲದ ಅಧ್ಯಕ್ಷರಾದ ದಿನೇಶ್ ಕೊಯಿಕುಳಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading