Ad Widget

ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸಾವಿತ್ರಿ ಕೆ. ನಿವೃತ್ತಿ

ಶ್ರೀ ಸುಬ್ರಹ್ಮಣ್ಯೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸಾವಿತ್ರಿ ಕೆ. ರವರು ಸೆ.30ರಂದು ಸೇವಾ ನಿವೃತ್ತಿ ಹೊಂದಿದರು.

. . . . . . . . .

24.10.1986 ರಲ್ಲಿ ವಾಣಿಜ್ಯ ವಿಭಾಗ ಆರಂಭಗೊಂಡಾಗ ಇಲ್ಲಿಗೆ ಉಪನ್ಯಾಸಕರಾಗಿ ಸೇರ್ಪಡೆಯಾದ ಇವರು ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 2016 ಡಿ.03 ರಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತಿದ್ದಾರೆ. ದ.ಕ. ಜಿಲ್ಲಾ ಪಿಯು ಪ್ರಿನ್ಸಿಪಾಲ್ ಅಸೋಸಿಯೇಷನ್ ಸುಳ್ಯ ತಾಲೂಕು ಪ್ರತಿನಿಧಿಯಾಗಿರುವ ಇವರು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಮಾಡಿರುತ್ತಾರೆ. ಇವರು ಸಂಸ್ಥೆಯಲ್ಲಿ ನಡೆದ 3 ದಿನಗಳ ಮೈಸೂರು ವಿಭಾಗ ಮಟ್ಟದ ಪ್ರಶ್ನೆಪತ್ರಿಕೆ ತಯಾರಿಕಾ ಕಾರ್ಯಾಗಾರದಲ್ಲಿ ಭಾಗಿಯಾಗಿರುತ್ತಾರೆ. ಅಲ್ಲದೇ ಇವರು ಹಾಸನದಲ್ಲಿ ನಡೆದ ತರಬೇತಿ ಸೇರಿದಂತೆ
ಹಲವಾರು ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಸ್ತುತ ಪುತ್ತೂರಿನ ದರ್ಬೆಯಲ್ಲಿ ವಾಸವಾಗಿರುವ ಇವರು ಪುತ್ತೂರು ತಾಲೂಕು ಪಡ್ನೂರಿನ ದಿ. ಭೀಮ ಜೋಯಿಸ ಮತ್ತು ದಿ. ಗೌರಿ ಯವರ ಪುತ್ರಿ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading