Ad Widget

ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯರವರಿಗೆ ಬೀಳ್ಕೊಡುಗೆ

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಸೆ.30 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

. . . . . . . . .

ನೂತನ ಪಿ.ಡಿ.ಒ ಅನುಷಾರವರಿಗೆ ಈ ಸಂದರ್ಭದಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಿತು.

. . . . . . .

ಶ್ರೀಮತಿ ಭವ್ಯ ಎಂ.ಬಿ.ಯವರನ್ನು ಪಂಚಾಯತ್ ವತಿಯಿಂದ ಶಾಲು ಹೊದಿಸಿ, ಫಲ‌ ಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಶ್ರೀಮತಿ ಭವ್ಯರವರು ಮಾತನಾಡಿ ಹಲವು ವರ್ಷಗಳ ಕಾಲ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರು ಮಾತನಾಡಿ ಪಿ.ಡಿ.ಒ.ರವರ ಕರ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು, ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು, ಪಿ.ಡಿ.ಒ ಅನುಷಾರವರು ಉಪಸ್ಥಿತರಿದ್ದು ಮಾತನಾಡಿದರು.

ಮಾಸ್ತಿಕಟ್ಟೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಇಂದಿರಾ ಕಾರ್ಯಕ್ರಮ ನಿರೂಪಿಸಿ, ಗ್ರಾಮ ಪಂಚಾಯತ್ ಸದಸ್ಯೆ ಭವ್ಯ ಸ್ವಾಗತಿಸಿ , ಶಿಕ್ಷಕಿ ಚೈತನ್ಯ ಪ್ರಾರ್ಥಿಸಿ, ಗ್ರಾ.ಪಂ.ಸದಸ್ಯ ಇಕ್ಬಾಲ್ ಬೆಳ್ಳಾರೆ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading