ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಶ್ರೀ ಗೌರಿ ಸಂಜೀವಿನಿ ಸ್ವ-ಸಹಾಯ ಸಂಘ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಸಭೆ, ದೂರದೃಷ್ಟಿ ಯೋಜನೆ ತಯಾರಿ, ನೀರು ನೈರ್ಮಲ್ಯ ಮಾಹಿತಿ, ಮನೆ ಮನೆಗೆ ನರೇಗಾ ಕಾರ್ಯಕ್ರಮ ಉದ್ಘಾಟನೆ, ಮನರೇಗಾ ಕಾಮಗಾರಿ ಬೇಡಿಕೆ ಸ್ವೀಕಾರ, ಸ್ವಚ್ಚತಾ ಚೀಲ ವಿತರಣೆ, ಗಾಂಧಿ ನಡಿಗೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿದೆಡೆ ಬೃಹತ್ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ವಚ್ಚತಾ ಪ್ರತಿಜ್ಞೆ ಬೋಧಿಸಿ, ಗ್ರಾಮೀಣ ಅಭಿವೃದ್ಧಿಗೆ ಪೂರಕವಾದ ಗಾಂಧಿ ತತ್ವವನ್ನು ಉಲ್ಲೇಖಿಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಸಂದೇಶ ನೀಡಿದರು. ವಿವಿಧ ಯೋಜನೆಗಳ ಹಾಗೂ ಯೋಜನಾ ತಯಾರಿಕೆಯ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ ಟಿ, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಎಮ್ ಬಿ ಕೆ ಶ್ರೀಮತಿ ಯಶೋಧ, ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ವಸಂತಿ ಪೈ, ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಗ್ರಾಮ ಸಭೆಯಲ್ಲಿ ಹಾಗೂ ಶ್ರಮದಾನದಲ್ಲಿ ಭಾಗವಹಿಸಿದರು.