ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 152ನೇ ಜನ್ಮದಿನೋತ್ಸವವನ್ನು ಅ.2ರಂದು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ಇದರ ಅಂಗವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ “ರಘುಪತಿ ರಾಘವ ರಾಜಾರಾಮ್ ಪತಿತ ಪಾವನ ಸೀತಾರಾಮ್ ” ಹಾಡು ಸರ್ವರಿಂದ ಮೊಳಗಿತು. ಪ್ರಭಾರ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜಗದೀಶ್ ಎನ್ ಎಂ ಇವರು ಗಾಂಧೀಜಯಂತಿಯ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಂದೆ ಮಡಪ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರು ಗಾಂಧಿ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಮರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಚಂದ್ರಶೇಖರ್ ಇವರು ಸ್ವಚ್ಛತಾ ಪ್ರತಿಜ್ಞೆ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಾಧವ ಎಸ್ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗ್ರಾಮ ಪಂಚಾಯತ್ ಸದಸ್ಯ ಜಯರಾಮ ಹಾಡಿಕಲ್ಲು ಇವರು ಮಹಾತ್ಮ ಗಾಂಧೀಜಿಯವರ ಗುಣಗಾನಗೈದು ಶುಭ ಹಾರೈಸಿದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಧರ್ಮಪಾಲ ತಳೂರು, ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ಶಿಕ್ಷಕ ರಂಜಿತ್ ಇವರು ಸರ್ವರಿಗೂ ವಂದನೆಗಳನ್ನು ಸಮರ್ಪಿಸಿದರು. ಯಶಸ್ವಿ ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಶಾಲಾ ಪುಟಾಣಿಗಳು, ಪೋಷಕರು ಉಪಸ್ಥಿತರಿದ್ದರು. ಭಾಗವಹಿಸಿದವರೆಲ್ಲರೂ ಶ್ರಮದಾನ ಕಾರ್ಯ ಹಾಗೂ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಚಂದ್ರಶೇಖರ ಪಾರೆಪ್ಪಾಡಿಯವರು ಎಲ್ಲರಿಗೂ ಸಿಹಿತಿಂಡಿ ಹಾಗೂ ಉಪಹಾರದ ವ್ಯವಸ್ಥೆ ಕಲ್ಪಿಸಿದರು. ಅಲ್ಲದೆ
ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಾಧವ ಎಸ್ ಸರ್ವರಿಗೂ ಲಡ್ಡು ಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿತು.