ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.5 ರಾತ್ರಿಯಿಂದ ನವರಾತ್ರಿ ಉತ್ಸವವು ಆರಂಭಗೊಂಡಿದ್ದು ಶ್ರೀ ಕ್ಷೇತ್ರದ ರಂಗಪೂಜೆ, ಭಕ್ತಾಧಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ಅ.6ರಂದು ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ ನೆರವೇರಿತು. ಮಧ್ಯಾಹ್ನ ಪೂಜೆ ನಡೆದು, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿ ಕೆಮ್ಮಿಂಜೆ, ಪವಿತ್ರವಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್, ವ್ಯವಸ್ಥಾಪನ ಸಮಿತಿ ಸದಸ್ಯರಾದ
ಜಯಪ್ರಕಾಶ್ ರೈ. ಬಿ, ದಾಮೋದರ ನಾಯ್ಕ, ಶ್ರೀಮತಿ ಭಾಗ್ಯಲಕ್ಷ್ಮೀ, ಪಿ.ವೆಂಕಟಕೃಷ್ಣ ರಾವ್, ಪಿ.ಜಗನ್ನಾಥ ರೈ, ನಾರಾಯಣ ಕೊಂಡೆಪ್ಪಾಡಿ, ಶ್ರೀಮತಿ ಯಶೋಧ.ಎ.ಎಸ್, ಸಿಬ್ಬಂದಿ ವಸಂತ ಪೆರುವಾಜೆ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅ.14ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪೂಜಾ ಕಾರ್ಯಗಳು ನೆರವೇರಲಿದ್ದು ದೇವಾಲಯದಲ್ಲಿ ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.15ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಪೂಜೆ ಮಾಡಿಸುವ ಭಕ್ತಾದಿಗಳು ಮುಂಚಿತವಾಗಿ ದೇವಸ್ಥಾನದ ಕಛೇರಿಯನ್ನು ಸಂಪರ್ಕಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ ವಿನಂತಿಸಿದ್ದಾರೆ.