
ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಶ್ರೀಮತಿ ಪ್ರೇಮಾ ಉದಯ್ ಕುಮಾರ್ ರವರು ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಯಲ್ಲಿ ಅ.10 ರಂದು ನಡೆದ ಅಖಿಲ ಭಾರತ ಕೇಂದ್ರೀಯ ಕನ್ನಡ ಸಾಹಿತ್ಯ ವೇದಿಕೆಯ ತೃತೀಯ ಕವಿ ಕಾವ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು.