ನಮ್ಮ ದೇಶವನ್ನು 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಪ್ರಧಾನಿಯವರ ಘೋಷಣೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಕ್ಷಯ ರೋಗದ ಲಕ್ಷಣ, ಪತ್ತೆ, ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿ ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವಲ್ಲಿ ಟಾಸ್ಕ್ ಪೋರ್ಸ್ ಸಮಿತಿಯ ಮಹತ್ವದ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ॥ ಅಶೋಕ್ ಕುಮಾರ್ , ಮಡಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್, ಮಡಪ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಜಯರಾಮ್ , ಮಡಪ್ಪಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪಿ ಸಿ ಜಯರಾಮ್ , ಪಂಚಾಯತ್ ಸದಸ್ಯರಾದ ಶರ್ಮಿಳಾ ಕೆ, ಸುಜಾತಾ , ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಜಲಜಾಕ್ಷಿ , ಶಿಕ್ಷಕರಾದ ಚಂದ್ರಶೇಖರ .ಪಿ, ಅಂಗನವಾಡಿ ಕಾರ್ಯಕರ್ತೆರಾದ ತಾರಾ. ಕೆ.ಎಸ್, ವಿಮಲ ಕೆ , ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಕುಂತಲಾ ಕೇವಳ ,ಆಶಾ ಕಾರ್ಯಕರ್ತೆ ಉಮಾವತಿ ,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.