2025ಕ್ಕೆ ಭಾರತವನ್ನು ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಘೋಷಣೆಯಂತೆ ಮುರುಳ್ಯ ಗ್ರಾಮವನ್ನು ಕ್ಷಯ ಮುಕ್ತಗೊಳಿಸುವ ಯೋಜನೆಗೆ ಪೂರ್ವಭಾವಿಯಾಗಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯು ಮುರುಳ್ಯ ಗ್ರಾಮ ಪಂಚಾಯತ್ನಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕು.ಜಾನಕಿ ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾತನಾಡಿ ಕ್ಷಯರೋಗಕ್ಕೆ ಸುಮಾರು ನಾಲ್ಕು ಸಾವಿರ ವರ್ಷಗಳ ಹಿನ್ನಲೆಯಿದ್ದು ಒಬ್ಬರಿಂದೊಬ್ಬರಿಗೆ ಗಾಳಿಯ ಮೂಲಕ ಹರಡುತ್ತದೆ. ಇದನ್ನು ಸೂಕ್ತ ಚಿಕಿತ್ಸೆಯಿಂದ ಸಂಪೂರ್ಣ ಗುಣಪಡಿಸಬಹುದಾಗಿದ್ದು ಸಮಾಜದ ಎಲ್ಲರ ಸಹಕಾರದಿಂದ ಕ್ಷಯ ಮುಕ್ತ ದೇಶ ಕಟ್ಟಲು ಸಾಧ್ಯ ಎಂದರು ಹಾಗೂ ಟಾಸ್ಕ್ ಪೋರ್ಸ್ ಸಮಿತಿಯ ಜವಾಬ್ದಾರಿಯ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮಂಜುನಾಥ ಉಪಸ್ಥಿತರಿದ್ದು ಆರೋಗ್ಯ ಇಲಾಖೆಯ ಮೂಲಕ ಕ್ಷಯರೋಗದ ಸೂಕ್ತ ಪತ್ತೆ, ಚಿಕಿತ್ಸೆ ಸೌಲಭ್ಯ ಉಚಿತವಾಗಿದ್ದು ಸಾರ್ವಜನಿಕರು ಇದರ ಪ್ರಯೋಜನವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದರು. ವೇದಿಕೆಯಲ್ಲಿದ್ದ ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕ ರಮೇಶ್ ಮಂಡ್ಯರವರು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವಲ್ಲಿ ಟಾಸ್ಕ್ ಪೋರ್ಸ್ ಸಮಿತಿಯ ಮಹತ್ವದ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಪತ್ತುಕುಂಜ, ಕಾರ್ಯದರ್ಶಿ ಸೀತಾರಾಮ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ರಾಹೆಲಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಬಿ .ಟಿ ಪೂವಮ್ಮ , ಪಂಚಾಯತ್ ಸದಸ್ಯರಾದ ಮೋನಪ್ಪ ಅಲೇಕಿ , ಕರುಣಾಕರ ಹುದೇರಿ, ಸುಂದರ , ಶೀಲವತಿ , ಪುಷ್ಪಲತಾ, ಆಶಾ ಕಾರ್ಯಕರ್ತೆರಾದ ರೇವತಿ ,ಉಷಾ, ಅಂಗನವಾಡಿ ಕಾರ್ಯಕರ್ತೆರಾದ ಹೇಮಾವತಿ, ಭವಾನಿ , ಮೀರಾ, ಮುರುಳ್ಯ ಸಹಕಾರಿ ಸಂಘದ ನಿರ್ದೇಶಕ ವಸಂತ ನಡುಬೈಲು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.