ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡ ಕನ್ನಡದಲ್ಲಿ ಮಾತನಾಡುವ ರಾಜ್ಯ ಮಟ್ಟದ ಸ್ಪರ್ಧೆಗೆ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಇವರು ಆನ್ ಲೈನ್ ಮೂಲಕ ಜಿಲ್ಲಾ ಮಟ್ಟದಲ್ಲಿ ನಡೆಸಿದ ಸ್ಪರ್ಧೆಯಲ್ಲಿ 5000 ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ದಿನಾಂಕ 30-10-2021ರಂದು ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಮಲ್ಲತಹಳ್ಳಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ಬು ಪ್ರತಿನಿಧಿಸಲಿದ್ದಾರೆ.
- Thursday
- November 21st, 2024