ಕಳಂಜ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಕ್ಷಯರೋಗದ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಮತ್ತು ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯನ್ನು ಕಳಂಜ ಗ್ರಾಮ ಪಂಚಾಯತಿನ ಗೌರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಗಿರೀಶ್ ಎಂ ಮತ್ತು ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಕ್ಷಯ ರೋಗದ ಲಕ್ಷಣ, ಪತ್ತೆ ಮಾಡುವ ವಿಧಾನ, ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿ ಕ್ಷಯರೋಗ ನಿರ್ಮೂಲನೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿಯ ಮಹತ್ವ ಮತ್ತು ಸಾರ್ವಜನಿಕರ ಸಹಭಾಗಿತ್ವದ ಬಗ್ಗೆ ವಿವರಿಸಿದರು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಕಿಲಂಗೋಡಿ ವಹಿಸಿದ್ದರು. ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್, ಉಪಾಧ್ಯಕ್ಷರಾದ ಗಣೇಶ್ ರೈ ಕಳಂಜ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಪ್ರೇಮಲತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಾಸುದೇವ ನಾಯಕ್, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಕೆ.ಸಿ .ಬೇಬಿ, ಆಶಾ ಕಾರ್ಯಕರ್ತೆ ಶೇಷಮ್ಮ , ಅಂಗನವಾಡಿ ಕಾರ್ಯಕರ್ತೆಯರಾದ ಯಶೋದಾ, ವಿಜಯ, ದೀಪ್ತಿ ಹಾಗೂ ಪಂಚಾಯತ್ ಸಿಬ್ಬಂದಿ ಗಿರಿಧರ ಕಳಂಜ ಉಪಸ್ಥಿತರಿದ್ದರು. ಕೆ.ಸಿ.ಬೇಬಿ ಸ್ವಾಗತಿಸಿ, ಶ್ರೀಧರ್. ಕೆ. ಆರ್ ವಂದಿಸಿದರು.