ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ 66ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಡಿ ಶುಭ ಹಾರೈಸಿದ ಪ್ರೌಢಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ಕನ್ನಡವನ್ನು ಉಳಿಸಿ ಬೆಳೆಸಿ ಎಂದರು. ಮುಖ್ಯಶಿಕ್ಷಕರಾದ ಯಶೋಧರ ಎನ್ ಶುಭಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕ ಹರಿಪ್ರಸಾದ ರೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಅಧ್ಯಾಪಕ ವೃಂದದವರು, ಸಿಬ್ಬಂದಿ ವರ್ಗದವರು, ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಕನ್ನಡ ನಾಡಗೀತೆ ಗಾಯನ, ಚಿತ್ರರಚನೆ, ಭಾಷಣ ಮುಂತಾದ ಚಟುವಟಿಕೆಗಳನ್ನು ಶಿಕ್ಷಕರು ನಡೆಸಿದರು.
- Wednesday
- December 4th, 2024