ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ರವರು ನ.02 ರಂದು ಸಂಜೆ ಆಗಮಿಸಿ ನ.03 ರಂದು ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಹೊಸಳಿಗಮ್ಮ, ನರಸಿಂಹ ದೇವರಿಗೆ ನಮಿಸಿ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾಂಕೇತಿಕವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಶೋಭಾ ಗಿರಿಧರ್, ವನಜಾ.ವಿ ಭಟ್, ಕಾರ್ಯನಿರ್ವಾಹಣಾಧಿಕಾರಿ ನಿಂಗಯ್ಯ, ಬಿಜೆಪಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೋನಪ್ಪ ಮಾನಾಡು, ಚಂದ್ರಾ ಕೋಲ್ಚಾರ್, ಗಿರಿಧರ್ ಸ್ಕಂದ, ರಾಜೇಶ್ ಕುದುರೆಮಜಲು ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ಸುಬ್ರಹ್ಮಣ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಡಿಡಿಪಿಐ ಹಾಗೂ ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ ಮತ್ತಿತರರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ