
ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ, ಅಲ್ಲಿಂದ ಕನ್ನಡ ಶಾಲೆಗೆ ಕರೆತಂದು ಶಾಲೆಯ ಆವರಣದಲ್ಲಿ ಡಿ.ಕೆ.ಎಸ್ ಆಯೋಜಿಸಿದ್ದ ಆಟೋಟ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಎಲ್ಲ ಕನ್ನಡಿಗರಿಗೆ ಶ್ರೀ ಹರೇಕಳ ಹಾಜಬ್ಬ ಅವರನ್ನು ಪರಿಚಯಿಸಿ ನಂತರ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಮತ್ತು ಎಲ್ಲ ದೆಹಲಿ ಕನ್ನಡಿಗರ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು.