
ಸುಳ್ಯ ತಾಲೂಕು ಸಿಪಿ ಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕು ಸಮ್ಮೆಳನದಲ್ಲಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಅವರ ಸಮ್ಮುಖದಲ್ಲಿ ಆಯ್ಕೆಮಾಡಲಾಯಿತು. ಪ್ರಸ್ತುತ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾಗಿ, ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ಕಾರ್ಮಿಕ ಸಂಘಟನೆಗಳಲ್ಲಿ ಹಾಗೂ ಇತರ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಸಮಾಜ ಸೇವಕರಾಗಿ ದುಡಿಯುತ್ತಿದ್ದಾರೆ.