ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2021-22ನೇ ಸಾಲಿನಲ್ಲಿ ಪ್ರಥಮ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 8 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಮಂಗಳೂರು ವಿಶ್ವವಿದ್ಯಾಲಯದ ಜಂಟಿ ನಿರ್ದೇಶಕರ ಕಛೇರಿಯ ವಿಶೇಷ ಅಧಿಕಾರಿ ಡಾ. ಜಯಕರ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾಹಿತಿ ನೀಡುತ್ತಾ, “ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರಿಯಾಗಿ ಅಳವಡಿಸಿಕೊಂಡಾಗ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ಸರಿಯಾದ ಗುರಿ ಮತ್ತು ಉದ್ದೇಶವನ್ನು ಇಟ್ಟುಕೊಂಡು ಪಡೆದ ಪ್ರತಿಯೊಂದು ಶಿಕ್ಷಣವು ಪರಿಪೂರ್ಣವಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಎಂ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ತೇಜಸ್ವಿನಿ ಹಾಗೂ ಅನಘಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ ವಂದಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಪೋಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದದವರು, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- Saturday
- November 23rd, 2024