
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ
ರಾಜ್ಯಶಾಸ್ತ್ರ ವಿಭಾಗ, ಚುನಾವಣಾ
ಸಾಕ್ಷರತಾ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇವುಗಳ ಆಶ್ರಯದಲ್ಲಿ
ವೋಟರ್ ಹೆಲ್ಪ್ ಲೈನ್ ಬಗ್ಗೆ ತರಬೇತಿ ಕಾರ್ಯಕ್ರಮ
ನವೆಂಬರ್ 12ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ತಹಶೀಲ್ದಾರರಾದ
ಕು. ಅನಿತಾಲಕ್ಷ್ಮಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಪೃಥ್ವೀಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕಿ ಶ್ರೀಮತಿ ರತ್ನಾವತಿ ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ ಕೆ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಗೀತಾ ವಂದಿಸಿದರು. ದ್ವಿತೀಯ ಬಿ ಎ ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.