Ad Widget

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಪುತ್ತೂರು ಸಹಾಯ ಆಯುಕ್ತರಾದ ಯತೀಶ್ ಉಳ್ಳಾಲ್ ಅವರ ಅದ್ಯಕ್ಷತೆಯಲ್ಲಿ ನ.15 ರಂದು ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಡಾ| ನಿಂಗಯ್ಯ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಸನ್ನ ಕುಮಾರ್ ದರ್ಭೆ, ಶ್ರೀವತ್ಸ, ಪಿ.ಜಿ.ಎಸ್.ಎನ್ ಪ್ರಸಾದ್, ವನಜಾ ಭಟ್, ಶೋಭಾ ಗಿರಿಧರ್, ಲೋಕೇಶ್, ಸಬ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ಮರ್ದಾಳ, ಮನೋಜ್ ಸುಬ್ರಹ್ಮಣ್ಯ, ಡಾ| ಚಂದ್ರಶೇಖರ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ ಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮಪಂಚಾಯತ್ ನವರು, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರು, ಸ್ಥಳೀಯ ಮುಖಂಡರು, ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು.

ನ.30 ರಂದು ಮೂಲ ಮೃತ್ತಿಕೆ ತೆಗೆಯುವ ಕಾರ್ಯಕ್ರಮ ಹಾಗೂ ಡಿ.01 ರಂದು ಕೊಪ್ಪರಿಗೆ ಏರಿ ಷಷ್ಠಿ ಮಹೋತ್ಸವ ಆರಂಭವಾಗಲಿದೆ.
ಡಿ.03 ರಂದು ಲಕ್ಷದಿಪೋತ್ಸವ, ಡಿ.7 ರಂದು ಚೌತಿ, ಡಿ.8 ರಂದು ಪಂಚಮಿ, ಡಿ.9 ರಂದು ಮಹಾ ರಥೋತ್ಸವ ನಡೆಯಲಿದೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!