- Tuesday
- April 1st, 2025

ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ಚಾರ್ವಾಕ ಕಲಾವಿದರ ತಂಡವುಸಕಲೇಶಪುರದ ಮರೆನಹಳ್ಳಿಯ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಶ್ರೀ ಮರವ್ವ ಜಾತ್ರೆಯಲ್ಲಿ ಭಾಗವಹಿಸಿದ್ದು, ಚೆಂಡೆ ಪ್ರದರ್ಶನ ನೀಡಿದೆ. ಕಡಬ ತಾಲೂಕಿನ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳವು 2 ದಿನಗಳಿಂದ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದೆ ಎಂದು ಮೇಳದ ವ್ಯವಸ್ಥಾಪಕ ಕಾರ್ಯದರ್ಶಿ ಶಿವಪ್ರಸಾದ್ ಜಿ., ಅಧ್ಯಕ್ಷರಾದ...

ಪೂದೆ ಶ್ರೀ ವಿಷ್ಣು ಮಹಾಗಣಪತಿ ದೇವಸ್ಥಾನ ಮುರುಳ್ಯ ಇಲ್ಲಿ ಇಂದು ನಡೆದ ನಿಧಿ ಕುಂಭ ಶಢಾದರ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ವಿದ್ಯಾರ್ಥಿಗಳು ಕುಣಿತ ಭಜನೆ ಸೇವೆ ನಡೆಸಿಕೊಟ್ಟರು. ತಂಡವನ್ನು ಶಿಕ್ಷಕ ಶಿವಪ್ರಸಾದ್.ಜಿ ಹಾಗೂ ಭಜನಾ ತರಬೇತುದಾರ ಸದಾನಂದ ಆಚಾರ್ಯ ಕಾಣಿಯೂರು ಇವರು ನಿರ್ದೇಶಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ,...

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ನಿಧೀಶ್ ಕುದ್ಪಾಜೆಗೆ ದೀಕ್ಷಾ ಡ್ರೇಡರ್ಸ್ ಮಾಲಕರಾದ ಮಾಧವ ರಾವ್ ಕೆ. ಬಹುಮಾನ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಮಮತಾ ಬ್ರಿಜೇಶ್, ಬ್ರಿಜೇಶ್ ಕುದ್ಪಾಜೆ ಹಾಗೂ ಪತ್ರಿಕಾ...

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅದ್ವಿಕ್ ಗೆ ಕುಂಕಂ ಫ್ಯಾಷನ್ ಮಾಲಕರಾದ ಭೀಮಾ ಪಟೇಲ್ ಹಾಗೂ ಧನು ಪಟೇಲ್ ನ.17ರಂದು ಬಹುಮಾನ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಹವ್ಯಾ, ವಿಜಯಕುಮಾರ್ ಪಾಲಾರ್ ಗುಂಡ್ಯ,...

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಗೆ ದ.ಕ. ಜಿಲ್ಲೆ, ಕಾಸರಗೋಡು ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಮತ ಕ್ಷೇತ್ರದಿಂದ ಸ್ಪರ್ಧಿಸಲು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ನ.16ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಹಕಾರ ಸಂಘಗಳ ಉಪ...

ಹರಿಹರ ಪಲ್ಲತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಪಾಠ ಪ್ರವಚನ ಸರಿಯಾಗಿ ನಡೆಸುತ್ತಿಲ್ಲ, ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುತ್ತಿಲ್ಲ ಎಂದು ಆರೋಪಿಸಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ತಾವೇ ಶಾಲೆಗೆ ಬಂದು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ(ನ.16) ನಡೆದಿದ್ದು, ಇಂದು(ನ.17) ವಿದ್ಯಾರ್ಥಿಗಳು ಶಾಲೆಗೆ ಬಾರದೆ ಶೂನ್ಯ ಹಾಜರಾತಿ ಆಗಿದೆ. ನಿನ್ನೆ ದಿನ ಕ್ಷೇತ್ರ ಶಿಕ್ಷಣಾಧಿಕಾರಿ...

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ 2021 --22ನೆಯ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭವು ನಡೆಯಿತು. ವಿದ್ಯಾರ್ಥಿ ಸರಕಾರದ ರಾಜ್ಯಪಾಲರಾದ ಶಾಲೆಯ ಮುಖ್ಯೋಪಾಧ್ಯಾಯರು ಸಮಾರಂಭದಲ್ಲಿ ಭಾಗವಹಿಸಿ ಸಭಾಪತಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಂಪುಟ ದರ್ಜೆಯ ಸಚಿವರುಗಳಿಗೆ ಶಾಲಾ ಸಂವಿಧಾನದಂತೆ ಸಂಸ್ಕೃತ , ಕನ್ನಡ ,ಇಂಗ್ಲಿಷ್ ,ಹಿಂದಿ ,ತುಳು ಭಾಷೆಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರಾಜ್ಯಪಾಲರ ನೆಲೆಯಿಂದ...