
ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ನ.19ರ ಶುಕ್ರವಾರದಂದು ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಗೋವುಗಳಿಗೆ ಪುಷ್ಪಾಲಂಕಾರ ಮಾಡಿ ಕರೆತರಲಾಯಿತು. ಬಳಿಕ ಈ ಮೊದಲು ಶ್ರೀ ಬಸವೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ್ ದೀಕ್ಷಿತ್ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಗೋವುಗಳಿಗೆ ಗೋಪೂಜೆ ನೆರವೇರಿಸಿ ಗೋಗ್ರಾಸ ನೀಡಿದರು. ಈ ಮೂಲಕ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವನಜಾ.ವಿ ಭಟ್, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಮನೋಜ್ ಸುಬ್ರಹ್ಮಣ್ಯ, ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ್ ಸ್ಕಂದ, ಉಪಾಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮನೋಹರ ನಾಳ, ಆಡಳಿತ ಮಂಡಳಿ ಸದಸ್ಯರಾದ ರಾಜೇಶ್ ಕುಲ್ಕುಂದ, ಗುಡ್ಡಪ್ಪ ಗೌಡ ಬೀಡಿನಗದ್ದೆ, ಬಾಲಕೃಷ್ಣ ಟೈಲರ್, ಶಿವರಾಮ ಪಳ್ಳಿಗದ್ದೆ, ಶೀನಪ್ಪ ಗೌಡ ನಡುತೋಟ, ಪ್ರಮುಖರಾದ ದಿನೇಶ್ ಸಂಪ್ಯಾಡಿ, ರಾಜೇಶ್.ಎನ್.ಎಸ್, ದಿನೇಶ್.ಬಿ.ಎನ್, ಪ್ರಸಾದ್.ಕೆ ರೈ, ಭಾರತಿ ದಿನೇಶ್, ಗಣೇಶ್ ಪರ್ವತಮುಖಿ, ರವಿ ಕಕ್ಕೆಪದವು, ಶೇಖರ್ ಪಳ್ಳಿಗದ್ದೆ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು
ವರದಿ :- ಉಲ್ಲಾಸ್ ಕಜ್ಜೋಡಿ