
ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಬೆಂಗಳೂರಿಗೆ ಹೋಗುವ ಸಂದರ್ಭದಲ್ಲಿ ಗೂನಡ್ಕದ ದಿ ಕಪ್ಸ್ ಕೆಫೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ನಾಯಕರನ್ನು ಹೂಗುಚ್ಛ ನೀಡಿ ಸನ್ಮಾನಿಸಿಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಟರ್ಲಿ, ಸುಳ್ಯ ಗ್ರಾಮಾಂತರ ಬ್ಲಾಕ್ ಕಾರ್ಯದರ್ಶಿ ಫಾರೂಕ್ ಕಾನಕ್ಕೋಡ್, ಸಂಪಾಜೆ ಗ್ರಾಮ ಸಮಿತಿ ಕಾರ್ಯದರ್ಶಿ ಶೇರೀಫ್ ಸೆಟ್ಯಡ್ಕ, ಕೋಶಧಿಕಾರಿ ಸಲೀಂ ಗೂನಡ್ಕ, ಗೂನಡ್ಕ ಬೂತ್ ಸಮಿತಿ ಅಧ್ಯಕ್ಷರಾದ ನಶ್ಫಾನ್ ಪೆಲ್ತಡ್ಕ, ಕಾರ್ಯಕರ್ತರಾದ ಮರ್ಜೂಕ್ ಕಡೆಪಾಲ, ಸಫ್ವಾನ್ ದರ್ಕಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.