
ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈ ತೋಟ ರಿಗೆ ಚಿನ್ನದ ಪದಕ ಲಭಿಸಿದೆ.
ನ. 12ರಿಂದ 14 ರವರೆಗೆ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ( ಹಿರಿಯರ ಕ್ರೀಡಾಕೂಟ) ನಲ್ಲಿ 100ಮೀ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ, 100 ಮೀ ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಇವರು ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.