ಪುತ್ತೂರಿನ ಫಿಲೊಮಿನಾ ಕಾಲೇಜಿನ ಸಿಲ್ವರ್ ಜುಬಿಲಿ ಹಾಲ್ ನಲ್ಲಿ ನಡೆದ ರೋಟರಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ 14ರ ವಯೋಮಾನದ ಕೆಳಗಿನ ವಿದ್ಯಾರ್ಥಿಗಳ ಗಾಯನ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಭಾಗವಹಿಸಿದ ಶ್ರಾವ್ಯ.ಎಸ್.ವಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಎಚ್ ಎಲ್ ವೆಂಕಟೇಶ್ ಮತ್ತು ಶ್ರೀಮತಿ ಜಾನಕಿ ದಂಪತಿಗಳ ಪುತ್ರಿ. ಇವರು ಪ್ರಸ್ತುತ ಕುಮಾರಸ್ವಾಮಿ ವಿದ್ಯಾಲಯದಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.