ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2021-22ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ.24 ರಂದು ಉದ್ಘಾಟನೆಗೊಂಡಿತು. ಈ ವಿದ್ಯಾರ್ಥಿ ಪರಿಷತ್ ನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಉದ್ಘಾಟಿಸಿ, ಆರೋಗ್ಯವಂತ ಶಿಕ್ಷಣ ಹಾಗೂ ಸತತ ಪ್ರಯತ್ನಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ.ಪಿ ಇವರು ರಾಷ್ಟ್ರಪತಿ ಸ್ಥಾನದಿಂದ ಮಂತ್ರಿ ಮಂಡಲದ ಪ್ರಧಾನಮಂತ್ರಿ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಸದಸ್ಯರುಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನೆಲ್ಸನ್ ಕ್ಯಾಸ್ಥಿಲಿನೋ ಇವರು ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ಸದಸ್ಯರುಗಳಿಗೆ ಶುಭ ಹಾರೈಸಿದರು. ಪ್ರೌಢಶಾಲಾ ವಿಭಾಗದ ಹಿಂದಿ ಶಿಕ್ಷಕರಾದ ಪ್ರಸನ್ನ ಕುಮಾರ್ ವೈ.ಪಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕಿ ಸವಿತಾ ಕುಮಾರಿ.ಪಿ., ವಾಣಿಜ್ಯಶಾಸ್ತ್ರ ಉಪನ್ಯಾಸಕಿ ದೀಪ್ತಿ ಹಾಗೂ ಪ್ರೌಢಶಾಲೆ ವಿಭಾಗದ ಸೌಜನ್ಯ ಗಣಿತ ಶಿಕ್ಷಕಿ, ಪ್ರಶಿಕ್ಷಣಾರ್ಥಿ ಅಶ್ವಿನಿ ಉಪಸ್ಥಿತರಿದ್ದರು. ಚುನಾವಣಾ ಕಾರ್ಯದ ಸಂಪೂರ್ಣ ಜವಾಬ್ದಾರಿ ವಹಿಸಿದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್ ಅಂಬೆಕಲ್ಲು ಇವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತಾ ಕುಮಾರಿ.ಪಿ. ಕನ್ನಡ ಉಪನ್ಯಾಸಕಿ ಧನ್ಯವಾದಗೈದರು. ಕುಮಾರಿ ಹರ್ಷಿತಾ.ಎಸ್. ಪ್ರಥಮ ವಾಣಿಜ್ಯ ವಿಭಾಗ ಕಾರ್ಯಕ್ರಮ ನಿರೂಪಿಸಿದರು.