ಚಿಗುರು ಯುವಕ ಮಂಡಲ ಪೆರಾಜೆ ಮತ್ತು ಜ್ಯೋತಿ ಪ್ರೌಢಶಾಲೆ ಪೆರಾಜೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ಮಧುಮೇಹ ಮತ್ತು ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ ಹಾಗೂ ಮಧುಮೇಹ ಮತ್ತು ರಕ್ತದೊತ್ತಡ ಬರದಂತೆ ತಡೆಯುವ ಮಾರ್ಗಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಡಿ.4 ರಂದು ಶನಿವಾರ ದಂದು ಜ್ಯೋತಿ ಪ್ರೌಢಶಾಲೆ ಪೆರಾಜೆ ಇಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಅನುಭವಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತಜ್ಞರಾದ ಡಾ.ಪುನೀತ್ ರಾಘವೇಂದ್ರ ಕುಂಟುಕಾಡು ಮತ್ತು ಹರಿಚರಣ್ ಕುರುಂಜಿ ಮಾಸ್ಟರ್ ಮೆಡಿಕಲ್ ಸುಳ್ಯ ಇವರು ಶಿಬಿರವನ್ನು ನಡೆಸಿಕೊಡಲಿದ್ದಾರೆ. ಶಿಬಿರವು ಬೆಳಿಗ್ಗೆ 9.00 ಉದ್ಘಾಟನೆಗೊಳ್ಳಲಿದೆ.ಈ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಳ್ಳುವವರು ಡಿ.3 ಶುಕ್ರವಾರದ ಒಳಗಾಗಿ ಸಂಘಟಕರಾದ ಭವಿತ್ ಕುಂಬಳಚೇರಿ 9611318590 ಹಾಗೂ ಚರಣ್ ರಾಜ್ ಕುಂಬಳಚೇರಿ 9481757685 ಇವರಲ್ಲಿ ನೋಂದಾಯಿಸಿ ಕೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ.
- Tuesday
- December 3rd, 2024