Ad Widget

ಡಾ. ಅನುರಾಧಾ ಕುರುಂಜಿಯವರಿಗೆ ರಾಷ್ಟ್ರಮಟ್ಟದ ಭಾರತ ವಿದ್ಯಾ ರತ್ನ ಅವಾರ್ಡ್

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಇಂಟರ್ ನ್ಯಾಷನಲ್ ಬ್ಯುಸಿನೆಸ್ ಕೌನ್ಸಿಲ್ ನವರು ಪ್ರತಿವರ್ಷ ಕೊಡಮಾಡುವ “ಭಾರತ ವಿದ್ಯಾ ರತ್ನ ಅವಾರ್ಡ್ 2021” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಕ ಹಾಗೂ ಸಂಘಟನಾ ಕ್ಷೇತ್ರವನ್ನು ಗಮನಿಸಿ ಕೊಡಮಾಡುವ 2021 ನೇ ಸಾಲಿನ‌ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಇವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23, 2021 ರಂದು ನವದೆಹಲಿಯಲ್ಲಿ ನಡೆಯುವ “ಎಜ್ಯುಕೇಷನ್ ಅಂಡ್ ಸೋಸಿಯೋ ಇಕಾನಾಮಿಕ್ ಡೆವೆಲಪ್ಮೆಂಟ್” ಎಂಬ ಅಂತಾರಾಷ್ಟ್ರೀಯ ವಿಚಾರ ಸಂಕಿರಣದ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading