ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಯಶೋಧರ ಎನ್ ದಿನದ ಮಹತ್ವವನ್ನು ವಿವರಿಸಿದರು. ಸಹ ಶಿಕ್ಷಕರಾದ ವೆಂಕಟೇಶ್ ಕುಮಾರ್ ಯು ಸಂವಿಧಾನದ ಪ್ರಸ್ತಾವನೆಯನ್ನು ಓದಿಸಿ, ಸಂದರ್ಭೋಚಿತವಾಗಿ ಮಾತನಾಡಿದರು. ಸಹಶಿಕ್ಷಕಿ ಸಹನಾ ಬಿ ಬಿ ಸ್ವಾಗತಿಸಿ, ವಂದನಾರ್ಪಣೆಗೈದರು.
ಅದೇ ದಿನ ಬೆಳಿಗ್ಗೆ 11.00 ಗಂಟೆಗೆ ರಾಷ್ಟ್ರಪತಿಗಳ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದ ನೇರಪ್ರಸಾರವನ್ನು ದೂರದರ್ಶನದ ಮೂಲಕ ವೀಕ್ಷಿಸಲು ಅವಕಾಶ ನೀಡಲಾಯಿತು.