ಹರಿಹರ ಪಲ್ಲತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.25 ರಂದು ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿ ಆರಂಭಗೊಂಡಿತು.
ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್.ಡಿ.ಎಂ.ಸಿ ಅದ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ದೇವಕಿ ನೆತ್ತಾರ ವಂದಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿ, ತೀರ್ಥರಾಮ ಕಿರಿಭಾಗ, ಪದ್ಮನಾಭ ಕಲ್ಕುದಿ, ಶ್ರೀದೇವಿ ಕಲ್ಲೇರಿಕಟ್ಟ, ಶ್ರೀಧರ ಭಾಗವತ್ ಹಾಗೂ ವಿದ್ಯಾರ್ಥಿಗಳ ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಸಹ ಶಿಕ್ಷಕರು ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ