ನಮ್ಮ ಊರಿನ ಹಾಗೂ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಈ ಬಾರಿಯ ಒಕ್ಕಲಿಗ ಸಮುದಾಯದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು ಈ ಭಾಗದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವವರೆಗೂ ಇಲ್ಲಿನ ಸಮುದಾಯ ಬಾಂಧವರಿಗೆ ಇಂಥದೊಂದು ಚುನಾವಣೆಯಿದೆ ಎಂಬ ಮಾಹಿತಿಯೇ ಇರಲಿಲ್ಲ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ಅವರು ಹೇಳಿದರು.
ಸುಳ್ಯದಲ್ಲಿ ನ.೨೬ ರಂದು ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಡಿ.12 ರಂದು ಜರುಗಲಿರುವ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಿಂದ ಪ್ರತಿನಿಧಿಸಲಿದ್ದು ತಮ್ಮ ಕಿರೀಟದ ಚಿಹ್ನೆಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೇ ಶೈಕ್ಷಣಿಕ ಹಾಗೂ ಆರ್ಥಿಕ ಮತ್ತು ಔದ್ಯೋಗಿಕವಾಗಿ ರಾಜ್ಯ ಸಂಘದಿಂದ ದೊರೆಯುವ ಸೌಲಭ್ಯಗಳು ಜಿಲ್ಲೆಗಳಿಗೂ ಸಿಗುವಂತೆ ಮಾಡಬೇಕೆಂಬ ಯೋಜನೆ ಇದೆ ಎಂದರು.
ಹಿಂದಿನ ಒಕ್ಕಲಿಗರ ಸಂಘದ ನಿರ್ದೇಶಕರು ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಹಾಗಾಗಿ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಅನಿವಾರ್ಯವಾಗಿ ನಾನು ಈ ಭಾಗದಲ್ಲಿ ಸ್ಪರ್ಧಿಸುತ್ತಿದ್ದೇನೆ. ಇದಕ್ಕೆ ಎಲ್ಲರ ಬೆಂಬಲ ನನಗೆ ಸಿಗಲಿದೆ ಎಂದರು.
ಈ ಸಂದರ್ಭ ಒಕ್ಕಲಿಗ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಸಿ ಬಳಿಕ ಹಿಂಪಡೆದಿದ್ದ ಭಾಸ್ಕರ ದೇವಸ್ಯ ಹಾಗೂ ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬಿ. ಯಂ. ಅವರು ತಮ್ಮ ಬೆಂಬಲವನ್ನು ಡಾ. ಚಿದಾನಂದರವರಿಗೆ ನೀಡುವುದಾಗಿ ಘೋಷಿಸಿದರು.